ಕನ್ನಡ ಭಾಷೆಗೆ ಅವಮಾನಿಸಿದ ಗೂಗಲ್ ಸಂಸ್ಥೆಯ ವಿರುದ್ಧ ಕುಮಾರಸ್ವಾಮಿ ಕಿಡಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ‘ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ?ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದ್ದಾರೆ.

ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ @Google ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ? ಎಂದು ಪ್ರಶ್ನಿಸಿದ್ದಾರೆ.

#ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದಿದ್ದಾರೆ.

“ಇದು ನಿನ್ನ ಭಾಷೆ, ಇದು ದೇಶಭಾಷೆ,
ಇದು ಸಾವಿರಾರು ವರ್ಷಗಳ ಸುಪುಷ್ಟ ಸಾಹಿತ್ಯಭಾಷೆ, ಇದು ಮಹಾಕವಿಗಳನ್ನೂ ಶಿಲ್ಪಿಗಳನ್ನೂ ರಾಜಾಧಿರಾಜರನ್ನೂ ವೀರಾಧಿವೀರರನ್ನೂ ರಸಋಷಿದಾರ್ಶನಿಕರನ್ನೂ ಹಡೆದಿರುವ ಭಾಷೆ” ಎಂಬುವ ರಾಷ್ಟ್ರಕವಿ ಕುವೆಂಪು ಅವರ ಸಾಲುಗಳು ಹೇಳುವ ಮೂಲಕ  ಕನ್ನಡ ನೆಲದ ಹಿರಿಮೆಯನ್ನು ಸ್ಮರಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು