ಕನ್ನಡ ನಿಘಂಟು ತಜ್ಞ ಪ್ರೋ. ಜಿ.ವೆಂಕಟಸುಬ್ಬಯ್ಯ ವಿಧಿವಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕನ್ನಡ ನಿಘಂಟು ತಜ್ಞರೆಂದೇ ಪ್ರಸಿದ್ಧಿ ಹೊಂದಿರುವ ಪದ್ಮಶ್ರೀ ಪ್ರೊ. ಜಿ. ವೆಂಕಟಸುಬ್ಬಯ್ಯ (108) ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ತಡರಾತ್ರಿ 1.15 ರ ವೇಳೆಗೆ ಜಿ. ವೆಂಕಟಸುಬ್ಬಯ್ಯ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.

1913 ಆಗಸ್ಟ್ 13 ರಂದು ಜನಿಸಿದ ಅವರು ಕನ್ನಡ ಭಾಷಾ ತಜ್ಞ, ಸಂಶೋಧಕ ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಭಾಷೆಯ ವ್ಯಾಕರಣ ಸೇರಿದಂತೆ. ಹಲವು ಗ್ರಂಥಗಳನ್ನು ರಚಿಸಿದ್ದಾರೆ.
ಕನ್ನಡ ನಿಘಂಟು ಶಾಸ್ತ್ರ ಪರಿಚಯ ಅವರ ಶ್ರೇಷ್ಠ ಗ್ರಂಥವಾಗಿದೆ. ಕನ್ನಡದ ‘ಜೀವಿ’ ಎಂದೇ ಸಾಹಿತ್ಯ ವಲಯದಲ್ಲಿ ಖ್ಯಾತರಾಗಿದ್ದ ಅವರು ಪಂಪ ಪ್ರಶಸ್ತಿ, ಕನ್ನಡ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಪದ್ಮಶ್ರೀ, ಭಾಷಾ ಸಮ್ಮಾನ್ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು