ಕನ್ನಡದ ಪ್ರತಿಭಾವಂತ ನಟ ಸಂಚಾರಿ ವಿಜಯ್ ಇನ್ನಿಲ್ಲ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ನಟ ಸಂಚಾರಿ ವಿಜಯ್ ಇಂದು ಆಸ್ಪತ್ರೆಯಲ್ಲಿ ನಿಧನರಾದರು.

ಮೊನ್ನೆ ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಗೆ ಕರೆ ತಂದು ಸ್ಕ್ಯಾನ್ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ಹೆಚ್ಚು ಪೆಟ್ಟಾಗಿತ್ತು, ರಕ್ತಸ್ರಾವವಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿ ದ್ದಾರೆ.

ಆಸ್ಪತ್ರೆ ಮುಂದೆ ಮಾತನಾಡಿದ ಸಂಚಾರಿ ವಿಜಯ್ ಅವರ ಸಹೋದರ ಸಿದ್ದೇಶ್, ಸಮಾಜದ ಒಳಿತಿಗಾಗಿ ಸಂಚಾರಿ ವಿಜಯ್ ದುಡಿಯುತ್ತಿದ್ದ ಹೀಗಾಗಿ ಅವನ ಅಂಗಾಂಗಗಳನ್ನ ದಾನ ಮಾಡಲು ನಿರ್ಧರಿಸಿದ್ದೇವೆ. ವೈದ್ಯರು ಹೇಳುವ ಪ್ರಕಾರ ಅವರ ನಾರ್ಮಲ್ ಡೆತ್ ಆದರೆ ಅಂಗಾಂಗ ದಾನವನ್ನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ಭಾವುಕರಾದರು.

‘ನಾನು ಅವನಲ್ಲ ಅವಳು’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಟ ಸಂಚಾರಿ ವಿಜಯ್, ಅಲ್ಲಮ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಒಗ್ಗರಣೆ, ಕೃಷ್ಣ ತುಳಸಿ, ಕಿಲ್ಲಿಂಗ್ ವೀರಪ್ಪನ್ ಸೇರಿದಂತೆ ಮುಂತಾದ ಸಿನಿಮಾಗಳಲ್ಲಿ ನಟಿಸಿದ ವಿಜಯ್ ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರಾಗಿದ್ದರು.

ವಿಜಯ್ ದಾಖಲಾಗಿದ್ದ ಆಸ್ಪತ್ರೆ ಮುಂದೆ ಬಂದು ಮಾತನಾಡಿದ ವಿಜಯ್ ಅವರ ಸಹೋದರ ನೀನಾಸಂ ಸತೀಶ್ ಅಣ್ಣನ ಆರೋಗ್ಯ ಸ್ಥಿರವಾಗುತ್ತಿಲ್ಲ, ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಬಿಕ್ಕಿ ಬಿಕ್ಕಿ ಅತ್ತಿದರು, ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು