ಕನ್ನಡವನ್ನು ಅಪಮಾನಿಸುವ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು: ಎಚ್.ಡಿ.ಕುಮಾರಸ್ವಾಮಿ ಆಗ್ರಹ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಬೆಳಗಾವಿಯ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ.

ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ ಎಂದು ಅವರು ಆಕ್ಷೇಪಿಸಿದರು.

ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ. ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್ , ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ ಎಂದು ಎಚ್ ಡಿ.ಕೆ. ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಕುಮಾರಸ್ವಾಮಿ ಸರಕಾರವನ್ನು ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು