ಕಪ್ಪು ಶಿಲೀಂದ್ರ ಸೋಂಕನ್ನು ಸೂಚಿತ ರೋಗ ಎಂದು ಘೋಷಿಸಲಾಗಿದೆ: ಸಚಿವ ಡಾ.ಕೆ.ಸುಧಾಕರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ನಂತರ ಕೆಲವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಅಂತರಶಿಸ್ತೀಯ ವಿಧಾನ ಅವಶ್ಯಕತೆಯಿದ್ದು ಇಎನ್‌ಟಿ ತಜ್ಞರು, ನೇತ್ರಶಾಸ್ತ್ರಜ್ಞರು, ಅರಿವಳಿಕೆ ವೈದ್ಯರು ಮತ್ತು ಮ್ಯಾಕ್ಸಿಲೊಫೇಶಿಯಲ್ ಶಸ್ತ್ರಜ್ಞರ ಅಗತ್ಯವಿರುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಅಗತ್ಯವಿರುವ ಈ ಎಲ್ಲ ತಜ್ಞ ವೈದ್ಯರುಗಳ ತಂಡ ಎಲ್ಲ ಸರ್ಕಾರಿ ಜಿಲ್ಲಾಸ್ಪತ್ರೆಗಳು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವುದರಿಂದ ಸೋಂಕಿತರು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದಿದ್ದಾರೆ.

ಕಪ್ಪು ಶಿಲೀಂದ್ರ ಸೋಂಕನ್ನು ಈಗಾಗಲೇ ಸೂಚಿತ ರೋಗ ಎಂದು ಘೋಷಿಸಲಾಗಿದ್ದು, ಈ ಸೋಂಕಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯ ಇರುವ ಯಾವುದೇ ಆಸ್ಪತ್ರೆ ಅಥವಾ ವೈದ್ಯಕೀಯ ಸಂಸ್ಥೆಗಳು ಸೋಂಕಿತರಿಗೆ ಚಿಕಿತ್ಸೆ/ಆಸ್ಪತ್ರೆ ದಾಖಲಾತಿ ನಿರಾಕರಿಸಬಾರದು. ಈ ನಿಟ್ಟಿನಲ್ಲಿ ಅತೀ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಡಾ.ಸುಧಾಕರ್ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು