ಸಧ್ಯಕ್ಕೆ ಇದೆಯಾ ಸಂಪುಟ ವಿಸ್ತರಣೆ?

bsy
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(01-10-2020): ರಾಜ್ಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿತ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ.ಸಧ್ಯಕ್ಕೆ ಸಚಿವ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಿದೆ.

 ಮುಖ್ಯಮಂತ್ರಿ ಯಡಿಯೂರಪ್ಪನವರು  ಶುಕ್ರವಾರ ಅಥವಾ ಶನಿವಾರ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯುವ ಸಾಧ್ಯತೆ ಇತ್ತು. ಆದರೆ ನಿನ್ನೆಯಷ್ಟೇ ವಿಧಾನಪರಿಷತ್ ಪದವೀಧರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದೆ. ಮತ್ತು ರಾಜರಾಜೇಶ್ವರಿ ನಗರ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಕೂಡ ಘೋಷಣೆಯಾಗಿದೆ. ಇದರಿಂದಾಗಿ ಸಂಪುಟ ವಿಸ್ತರಣೆ ಕಗ್ಗಂಟಾಗಲಿದೆ ಎಂದು ಸಿಎಂ ಸಂಪುಟ ವಿಸ್ತರಣೆ ಮುಂದೂಡಿಕೆ ತಂತ್ರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಸಿ ಅಗತ್ಯಬಿದ್ದರೆ ದೆಹಲಿಗೆ ತೆರಳಿ ಚರ್ಚಿಸುವುದಾಗಿ ಹೇಳಿದ್ದಾರೆ. ಸಚಿವ ಸಂಪುಟ ಸೇರ್ಪಡೆಗೆ ರಾಜ್ಯ ಬಿಜೆಪಿ ಶಾಸಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದರು. ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಕೂಡ ವಿಚಾರ ಪ್ರಸ್ತಾಪವಾಗಿತ್ತು. ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲದಕ್ಕೂ ಬ್ರೇಕ್ ಬಿದ್ದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು