ಬೆಂಗಳೂರು(18-11-2020): ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸುವ ಸರಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಡಿ.5ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ಮರಾಠ ಪ್ರಾಧಿಕಾರ ರಚನೆಯನ್ನು ವಾಪಾಸ್ಸು ತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಡಿ.5ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಹೇಳಿದ್ದಾರೆ.
ಡಿ.5ರಂದು ಕರ್ನಾಟಕ ಬಂದ್ ಅಧೀಕೃತವಾಗಿ ಘೋಷಣೆಯಾದರೆ ಎಲ್ಲಾ ಕನ್ನಡ ಪರ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.