ಕರ್ನಾಟಕ ಬಂದ್| ಹಲವೆಡೆ ಬಸ್ಸ್ ಗಳಿಗೆ ಕಲ್ಲುತೂರಾಟ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

karnataka bandh
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು (05-12-2020): ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರುದ್ಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ದೊರೆತಿದೆ.

ಬೆಂಗಳೂರಿನ ಹಲವೆಡೆ ಕಲ್ಲುಗಳ ತೂರಾಟ ಮತ್ತು ಅಲ್ಲಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಪ್ರತಿಭನಾಕಾರರು  ವ್ಯಕ್ತಪಡಿಸುತ್ತಿದ್ದಾರೆ. ಹೊಸೂರು ರಸ್ತೆಯ ಹಳೇ ಚಂದಾಪುರ ಬಳಿ ಬಿಎಂಟಿಸಿ ಬಸ್ ಮೇಲೂ ಕಲ್ಲು ತೂರಾಟ ನಡೆದಿದೆ. ಕೆಆರ್.ಪುರಂನ ಪೈ ಲೈಔಟ್ ನಲ್ಲಿ ಬಿಎಂಟಿಸಿ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಟೌನ್‌ಹಾಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಹಲವು ಕನ್ನಡ ಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ ಸೇವೆಗಳು ಎಂದಿನಂತಿದೆ.ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಜನರು ಆತಂಕಿತರಾಗಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು