ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಸಿಡಿಯುತ್ತಾ ಸಿಡಿ ವಿಚಾರ?

yediyurappa
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಗುರುವಾರದಿಂದ ಆರಂಭವಾಗಲಿದ್ದು, ಬಾರಿ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. 19 ದಿನಗಳಲ್ಲಿ ಮೊದಲ ಎರಡು ದಿನ  “ಒಂದು ದೇಶ ಒಂದು ಚುನಾವಣೆಎಂಬ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ.

ಮಾರ್ಚ್ 8ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2021-22 ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಅಕ್ರಮ ಗಣಿಗಾರಿಕೆ, ಕುಡಿಯುವ ನೀರು, ಜಾನುವಾರುಗಳ ಮೇವು, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೊದಲಾದ ವಿಚಾರಗಳು ಚರ್ಚೆಯಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.

ಪ್ರತಿಪಕ್ಷಗಳು ರಮೇಶ್ ಜಾರಕಿಹೊಳಿ ಸಿಡಿಯ ವಿಚಾರವಾಗಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಳ್ಳುವ ಸಾಧ್ಯತೆಗಳು ಕಾಣುತ್ತಿವೆ. ಮಾ. 8ರಂದು ಬಜೆಟ್ಮಂಡನೆಯಾಗಲಿದ್ದು, ಅನಂತರ ಮಾ. 31 ವರೆಗೆ ಬಜೆಟ್ಮೇಲಿನ ಚರ್ಚೆ, ಸರಕಾರದ ಉತ್ತರ, ಪ್ರಶ್ನೋತ್ತರ ಕಲಾಪಗಳು ಇರಲಿವೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು