ಕರ್ನಾಟಕ ಬೈ ಎಲೆಕ್ಷನ್:ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿಯ ಟಿಕೇಟ್ ಘೋಷಣೆಯಾಗಿದೆ. ಹೆಚ್ಚಿನ ಆಕಾಂಕ್ಷಿಗಳು ಹೊಂದಿರುವ ಬಸವಕಲ್ಯಾಣ ಕ್ಷೇತ್ರ ಬಿಜೆಪಿ ಟಿಕೇಟ್ ತುಂಬಾ ಕುತೂಹಲ ಮೂಡಿಸಿತ್ತು. ಎಪ್ರಿಲ್ 17ರಂದು ನಡೆಯಲಿರುವ ಮಸ್ಕಿ ,ಬಸವಕಲ್ಯಾಣ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಹಾಗೂ ಬೆಳಗಾವಿ ಲೋಕಸಭೆಯ ಉಪ ಚುನಾವಣೆಗೆ ಬಿಜೆಪಿ ಪಕ್ಷ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಮಾಡಿದೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಶರಣು ಸಲಗರ, ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಪ್ರತಾಪಗೌಡ ಪಾಟೀಲ್ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಟಿಕೇಟ್ ಫೈನಲ್ ಆಗಿದೆ.

ಕಾಂಗ್ರೆಸ್ ಬಿಜೆಪಿ ಹಾಗೂ ಜೆಡಿಎಸ್ ಮೂರು ರಾಜಕೀಯ ಪಕ್ಷಗಳು ಮೂರು ಕ್ಷೇತ್ರಗಳಲ್ಲಿ ಈಗಾಗಲೇ ಬಹಿರಂಗ ಪ್ರಚಾರ ನಡೆಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಕೂಡ ಈ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಜೆಡಿಎಸ್ ಬಸವಕಲ್ಯಾಣ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯನ್ನು ಘೋಷಿಸಿ ಪ್ರಚಾರ ನಡೆಸುತ್ತಿದೆ.

ತ್ರಿಕೋನ ಸ್ಪರ್ಧೆ ಒಡ್ಡುವ ಮೂರು ಕ್ಷೇತ್ರದಲ್ಲಿ ಭಾರಿ ಪೈಪೋಟಿ ಇದೆ. ಎರಡು ವಿಧಾನಸಭೆ ಹಾಗೂ ಒಂದು ಲೋಕಸಭಾ ಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಮತದಾರ ಯಾವ ಪಕ್ಷಕ್ಕೆ ಮಣೆ ಹಾಕುತ್ತಾನೆ ಎಂಬುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು