ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ಪರಿಹಾರ ಹಣ ವರ್ಗಾವಣೆ ಮಾಡಿದ್ದೇನೆ : ಬಿ. ಎಸ್. ಯಡಿಯೂರಪ್ಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. (ನೇರ ನಗದು ವರ್ಗಾವಣೆ) ಮೂಲಕ ಜಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿ ಬಿ. ಎಸ್. ವೈ. ಅವರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಸರ್ಕಾರದಿಂದ ಘೋಷಣೆ ಮಾಡಿರುವ ಕೋವಿಡ್ 2ನೇ ಅಲೆಯ ಪರಿಹಾರ ಸಹಾಯಧನವನ್ನು ನೇರವಾಗಿ ಅವರುಗಳ ಬ್ಯಾಂಕ್ ಖಾತೆಗೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಜಮೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, 4 ಲಕ್ಷ ಕಟ್ಟಡ ಕಾರ್ಮಿಕರಿಗೆ ₹  10 ಕೋಟಿ ವರ್ಗಾವಣೆ ಮಾಡಿದ್ದೇನೆ. ಸುಮಾರು 25 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಒಟ್ಟು 749.55 ಕೋಟಿ ವರ್ಗಾವಣೆ ಮಾಡಲಾಗುತ್ತಿದೆ ಎಂದಿದ್ದಾರೆ.

ಅಸಂಘಟಿತ ವಲಯದ ಒಟ್ಟು 11 ವರ್ಗದ ಕಾರ್ಮಿಕರಿಗೆ (ಕ್ಷೌರಿಕರು, ಅಗಸರು, ಟೈಲರ್‌ಗಳು, ಹಮಾಲಿಗಳು, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್‌ಗಳು, ಕಮ್ಮಾರರು, ಗೃಹ ಕಾರ್ಮಿಕರು) ಅರ್ಜಿ ಸಲ್ಲಿಸಲು ಅನುಕೂಲ ಆಗುವಂತೆ ಆನ್‌ಲೈನ್‌ ಅರ್ಜಿ ಸಲ್ಲಿಸುವ ವ್ಯವಸ್ಥೆಗೂ ಚಾಲನೆ ನೀಡಲಾಗಿದೆ ಎಂದೂ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ , ಕಾರ್ಮಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಿ. ಕಲ್ಪನಾ, ಇ-ಆಡಳಿತ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಕಾರ್ಮಿಕ ಆಯುಕ್ತ ಅಕ್ರಮ್ ಪಾಷಾ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು