ಖ್ಯಾತ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಖ್ಯಾತ ಹಿರಿಯ ಸಾಹಿತಿ, ದಲಿತ ಕವಿ ಡಾ.ಸಿದ್ದಲಿಂಗಯ್ಯನವರು ಕೋವಿಡ್ ನಿಂದ ಇಂದು ನಿಧನರಾಗಿದ್ದಾರೆ.

ಕಳೆದ ಎರಡ್ಮೂರು ವಾರಗಳಿಂದ ಅವರಿಗೆ ಕೋವಿಡ್ ದೃಢಪಟ್ಟಿತ್ತು, ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಡಾ.ಸಿದ್ಧಲಿಂಗಯ್ಯನವರು ಊರುಕೇರಿ, ಹೊಲೆಮಾದಿಗರ ಹಾಡು, ನನ್ನ ಜನಗಳು ಸೇರಿದಂತೆ ಹಲವು ಕೃತಿಗಳು ರಚಿಸಿದ್ದಾರೆ, ದಲಿತ ಸಾಹಿತ್ಯಕ್ಕೆ ಸಂಬಂಧಿಸಿದ ಹಲವು ಕೃತಿಗಳು ಅವರು ರಚಿಸಿದ್ದಾರೆ, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಅವರು ‘ಬಂಡಾಯ ಸಾಹಿತಿ’ ಎಂದೇ ಹೆಚ್ಚು ಪ್ರಸಿದ್ಧಿ ಪಡೆದಿದ್ದರು.

‘ದಲಿತ ಧ್ವನಿ’ ಎಂದೇ ಪ್ರಸಿದ್ಧಿ ಪಡೆದಿದ್ದ ಸಿದ್ದಲಿಂಗಯ್ಯ ಹಲವು ದಲಿತ ಹೋರಾಟ, ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ನಾಟಕ, ಪ್ರಬಂಧ, ವಿಮರ್ಷೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು