ಕವಿ ಸಿದ್ದಲಿಂಗಯ್ಯ ಅವರ ನಿಧನದಿಂದ ಭಾರತೀಯ ಸಾಹಿತ್ಯಕ್ಕೆ ಮತ್ತು ದಲಿತ ಸಮುದಾಯಕ್ಕೆ ನಷ್ಟ: ಮಮತಾ ಬ್ಯಾನರ್ಜಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕನ್ನಡದ ಕೋಗಿಲೆ ಖ್ಯಾತ ಕವಿ,ಸಾಹಿತಿ ಡಾ. ಸಿದ್ದಲಿಂಗಯ್ಯನವರ ನಿಧನಕ್ಕೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

ಡಾ.ಸಿದ್ದಲಿಂಗಯ್ಯ ಅವರ ನಿಧನದಿಂದ ಭಾರತೀಯ ಸಾಹಿತ್ಯಕ್ಕೆ ಮತ್ತು ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಮತಾ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಮತಾ,
ದಲಿತ ಕವಿ ಮತ್ತು ಕಾರ್ಯಕರ್ತ ಸಿದ್ದಲಿಂಗಯ್ಯ ಅವರ ನಿಧನದ ಬಗ್ಗೆ ಕೇಳಿ ಬೇಸರವಾಯಿತು.
ಅವರ ಕ್ರಾಂತಿಕಾರಿ ಕಾವ್ಯ, ದಲಿತ ರಾಜಕೀಯದಲ್ಲಿ ಪಾತ್ರ ಮತ್ತು ದಲಿತರ ಹಕ್ಕುಗಳಿಗೆ ಧ್ವನಿ ನೀಡಿದ್ದಕ್ಕಾಗಿ ಅವರನ್ನು ಸ್ಮರಿಸಲಾಗುವುದು. ಅವರ ನಿಧನವು ಭಾರತೀಯ ಸಾಹಿತ್ಯ ಮತ್ತು ದಲಿತ ಸಮುದಾಯಕ್ಕೆ ಭರಿಸಲಾಗದ ನಷ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ಮೂಲಕ ನಮನಗಳು ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು