ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿವೆ: ಡಿ.ಕೆ.ಶಿವಕುಮಾರ್ ಆಕ್ರೋಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಆರೋಗ್ಯ, ಶಿಕ್ಷಣಕ್ಕೆ ಆದ್ಯತೆ ನೀಡಿ, ಅವರಿಗೆ ಆರ್ಥಿಕ ಶಕ್ತಿ ತುಂಬುವುದರ ಜೊತೆಗೆ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳುವ ಮೂಲಕ ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ, ಬಡ-ಮಧ್ಯಮ ವರ್ಗಕ್ಕೆ ಉಚಿತ ಆರೋಗ್ಯ ಸೇವೆಯನ್ನು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿ ನಿವಾರಣೆ ಕುರಿತು ಸರ್ಕಾರಕ್ಕೆ ಸಲಹೆಗಳನ್ನು ನೀಡಿದರು.

“ಕೊರೊನ ಹೆಸರಲ್ಲಿ ಸರ್ಕಾರ ನಡೆಸಿದ ಭ್ರಷ್ಟಾಚಾರವನ್ನು ಬಿಟ್ಟು ಮತ್ತೇನನ್ನೂ ನಾವು ಪ್ರಶ್ನಿಸಲಿಲ್ಲ. ಕೋವಿಡ್ ಬಗ್ಗೆ ಮೊದಲೇ ತಿಳಿದಿದ್ದರೂ, 1 ವರ್ಷ ಕಾಲಾವಕಾಶವಿದ್ದೂ ಸಿದ್ಧತೆ ಮಾಡಿಕೊಂಡಿಲ್ಲ ಎಂದರೆ ಸರ್ಕಾರ ಹೇಗೆ ನಡೆಸುತ್ತಿದ್ದಾರೆ? ಸರ್ಕಾರ ಹೇಳಿದಂತೆ ಸಿದ್ಧತೆ ಮಾಡಿಕೊಂಡಿದ್ದರೆ ಜನರಿಗೆ ಹಾಸಿಗೆ ಏಕೆ ಸಿಗುತ್ತಿಲ್ಲ? ಇಡೀ ದೇಶದಲ್ಲೇ ಅತಿ ಹೆಚ್ಚು ವೈದ್ಯರು, ಆಸ್ಪತ್ರೆಗಳು, ನರ್ಸ್ ಸೇರಿದಂತೆ ಅತ್ಯುತ್ತಮ ವೈದ್ಯಕೀಯ ಸೇವೆ, ಮಾನವ ಸಂಪನ್ಮೂಲ ಕರ್ನಾಟಕದಲ್ಲಿದೆ. ಹಾಗಿದ್ದರೂ ಜನರಿಗೆ ಅಗತ್ಯ ಚಿಕಿತ್ಸೆ ಸಿಗುತ್ತಿಲ್ಲ, ರೆಮಿಡಿಸಿವಿರ್ ಕೊರತೆ ಇದೆ ಎಂದರೆ ಹೇಗೆ?” ಎಂದು ಅವರು ಪ್ರಶ್ನಿಸಿದರು.

ಅಧಿಕಾರಿಗಳು ಸೇರಿದಂತೆ ಇಡೀ ಸರ್ಕಾರವೇ ಈ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಜಿಲ್ಲಾ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಜಿಲ್ಲಾವಾರು ಸಭೆಗಳನ್ನು ನಡೆಸಿ ಜವಾಬ್ದಾರಿ ಹಂಚದಿದ್ದರೆ, ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳದಿದ್ದರೆ ಹೇಗೆ? ಸಚಿವರುಗಳು ಎಷ್ಟು ಜಿಲ್ಲೆಗಳಿಗೆ ಹೋಗಿದ್ದಾರೆ, ಎಷ್ಟು ಸಭೆಗಳನ್ನು ನಡೆಸಿದ್ದಾರೆ, ಯಾವ ಆಸ್ಪತ್ರೆಗೆ ಹೋಗಿದ್ದಾರೆ ಎನ್ನುವುದನ್ನು ಗಮನಿಸಿ ಎಂದು ಒತ್ತಾಯಿಸಿದರು.

“ಜನ ಇದ್ದರೆ ಜೀವನ, ಜನ ಇದ್ದರೆ ಆರ್ಥಿಕತೆ – ಸರ್ಕಾರ ಎಲ್ಲವೂ. ಜನರನ್ನು ಹೇಗೆ ಉಳಿಸಿಕೊಳ್ಳಬೇಕು ಎನ್ನುವುದು ಮುಖ್ಯ. ಮಾರ್ಚ್, 2020ರಿಂದ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ಜನರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿವೆ. ಬಿಜೆಪಿ ಸರ್ಕಾರಗಳು ಹೇಳಿದ್ದೆಲ್ಲವನ್ನು ಪಾಲಿಸಿದ್ದೇವೆ. ಅವರಿಗೆ ಸಂಪೂರ್ಣ ಸಹಕಾರ ನೀಡಿದ್ದೇವೆ.ಇಡೀ ದೇಶ, ರಾಜ್ಯದ ಜನರು ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ಜೊತೆಗೆ ನಿಂತರೂ ಈ ಸರ್ಕಾರಗಳು ಕೊರೊನ ಸೋಂಕು ನಿಯಂತ್ರಿಸಿವಲ್ಲಿ ಸಂಪೂರ್ಣ ವಿಫಲವಾಗಿವೆ. ನಾವು ಬದುಕುತ್ತೇವೆಯೋ ಇಲ್ಲವೋ ಎನ್ನುವ ದೊಡ್ಡ ಆತಂಕ ಜನರಿಗೆ ಪ್ರಾರಂಭವಾಗಿದೆ. ಇಂತಹ ಸಂದರ್ಭದಲ್ಲಿ ಎರಡೂ ಸರ್ಕಾರಗಳ ಆದ್ಯತೆ ಏನಾಗಿರಬೇಕು ಎನ್ನುವುದು ಬಹಳ ಮುಖ್ಯ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು