ಕೇಂದ್ರ ಸರ್ಕಾರ ಲಾಭವನ್ನು ಖಾಸಗೀಕರಣಗೊಳಿಸಿ, ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕುಗಳನ್ನು “ಗೆಳೆಯರಿಗೆ” ಮಾರಾಟ ಮಾಡುವುದರಿಂದ ದೇಶದ ಆರ್ಥಿಕ ಭದ್ರತೆಗೆ ಧಕ್ಕೆಯುಂಟಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರವು “ಲಾಭವನ್ನು ಖಾಸಗೀಕರಣಗೊಳಿಸುತ್ತಿದೆ ಮತ್ತು ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ” ಎಂದು ಅವರು ಆರೋಪಿಸಿದರು.

“ಭಾರತ ಸರ್ಕಾರ (ಜಿಒಐ) ಲಾಭವನ್ನು ಖಾಸಗೀಕರಣಗೊಳಿಸುತ್ತಿದೆ ಮತ್ತು ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ. ಪಿಎಸ್‌ಬಿಗಳನ್ನು ಮೋದಿಯು ಗೆಳೆಯರಿಗೆ ಮಾರಾಟ ಮಾಡುವುದು ಭಾರತದ ಆರ್ಥಿಕ ಭದ್ರತೆಗೆ ತೀವ್ರವಾಗಿ ಧಕ್ಕೆಯುಂಟುಮಾಡುತ್ತದೆ” ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣದ ವಿರುದ್ಧ ಎರಡು ದಿನಗಳ ಮುಷ್ಕರ ನಡೆಸುತ್ತಿರುವ ಪ್ರತಿಭಟನಾ ನಿರತ ಬ್ಯಾಂಕ್ ನೌಕರರಿಗೂ ಕಾಂಗ್ರೆಸ್ ನಾಯಕ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ನಾನು ಮುಷ್ಕರ ನಿರತರಾಗಿರುವ ಬ್ಯಾಂಕ್ ಉದ್ಯೋಗಿಗಳ ಬೆಂಬಲಕ್ಕೆ ನಿಲ್ಲುತ್ತೇನೆ” ಎಂದು ಅವರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು