ತಿರುವನಂತಪುರ(06/11/2020): ಕೇರಳದಲ್ಲಿ ಕ್ರಾಂತಿಕಾರಿ ಕಾರ್ಯವೊಂದಕ್ಕೆ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಮುಂದಡಿಯಿಟ್ಟಿದೆ.
ಸದ್ಯದಲ್ಲೇ ದೇವಸ್ವಂ ಮಂಡಳಿ ತನ್ನ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಸದ್ಯದಲ್ಲೇ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅರ್ಚಕರನ್ನು ನೇಮಿಸಲಿದೆ. ಈ ಬಗ್ಗೆ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಕೇರಳ ದೇವಸ್ವಂ ಸಚಿವ ಕಡಕಂಪಳ್ಳಿ ಸುರೇಂದ್ರನ್ ಹಂಚಿಕೊಂಡಿದ್ದಾರೆ.
ಈ ಮೂಲಕ ಕೇರಳದ ದೇವಸ್ಥಾನಗಳಲ್ಲಿ ಪರಿಶಿಷ್ಟ ಸಮುದಾಯದವರಿಗೂ ಪೂಜೆ ನೆರವೇರಿಸುವುದಕ್ಕೆ ಅವಕಾಶ ದೊರೆತಂತಾಗುತ್ತದೆ. ಇದೊಂದು ಐತಿಹಾಸಿಕ ನಿರ್ಧಾರ ಎನ್ನಲಾಗಿದೆ.
ಟಿಡಿಬಿ ಸ್ವಾಯತ್ತ ದೇವಸ್ಥಾನ ಮಂಡಳಿಯಾಗಿದ್ದು, ಶಬರಿಮಲೆ ಅಯ್ಯಪ್ಪ ದೇಗುಲ ಸೇರಿದಂತೆ ರಾಜ್ಯದಲ್ಲಿ 1,200 ದೇಗುಲಗಳ ನಿರ್ವಹಣೆ ಮಾಡುತ್ತಿದೆ. ಈ ದೇಗುಲಗಳಲ್ಲಿ ಅರೆಕಾಲಿಕ ಅವಧಿಗೆ ಪರಿಶಿಷ್ಟ ಜಾತಿಗೆ ಸೇರಿದ 18 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದಂತೆ ಒಬ್ಬರನ್ನು ಮಂಡಳಿ ಅರ್ಚಕರನ್ನಾಗಿ ನಿಯೋಜಿಸಲಿದೆ.
ವಿಶೇಷ ನೇಮಕಾತಿಯಡಿಯಲ್ಲಿ ಪರಿಶಿಷ್ಟ ಸಮುದಾಯದವರು ಅರೆಕಾಲಿಕ ಅರ್ಚಕರಾಗಿ ದೇವಸ್ಥಾನಗಳಿಗೆ ನೇಮಕವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.