ಕೇರಳದಲ್ಲಿ ಮೇ 8ರಿಂದ ಮೇ16ರವರೆಗೆ ಸಂಪೂರ್ಣ ಲಾಕ್ ಡೌನ್ : ಸಿಎಂ ಪಿಣರಾಯಿ ವಿಜಯನ್ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ತಿರುವನಂತಪುರಂ: ದೇಶದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳ ರಾಜ್ಯದಲ್ಲಿ ಮೇ 8ರಿಂದ ಮೇ 16 ರವರೆಗೆ ಕಂಪ್ಲೀಟ್ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.

ಕೋವಿಡ್ ಎರಡನೇ ಅಲೆಯಿಂದ ರಾಜ್ಯದಲ್ಲಿ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೊರೋನಾ ಕಂಟ್ರೋಲ್ ಗೆ ಬರದ ಕಾರಣ ಲಾಕ್ ಡೌನ್ ಒಂದೇ ಅಂತಿಮ ಅಸ್ತ್ರ ಎಂದು ತಿಳಿದ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಮೇ 8ರಿಂದ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ದಿನೇದಿನೇ ಸೋಂಕು ಪ್ರಕರಣ ಹೆಚ್ಚಳವಾಗುತ್ತಿದೆ, ನಿನ್ನೆ 50 ಸಾವಿರಕ್ಕೂ ಅಧಿಕ ಹೊಸ ಕೇಸ್ ವರದಿಯಾಗಿವೆ. ರಾಜ್ಯದಲ್ಲಿ ಜಾರಿಯಲ್ಲಿರುವ ‘ಬಿಗಿಕ್ರಮ’ ಮೇ 12ಕ್ಕೆ ಮುಕ್ತಾಯಗೊಳ್ಳಲಿದೆ, ಸೋಂಕು ಪ್ರಮಾಣ ಇಳಿಕೆ ಆಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಕಂಪ್ಲೀಟ್ ಲಾಕ್ ಡೌನ್ ಜಾರಿಗೊಳಿಸದರೆ ಬಡ, ಕೂಲಿಕಾರರು ತೀವ್ರ ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸುವುದು ಕಠಿಣವಾಗುತ್ತದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು