ಕೇಸರಿ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ?: ವಿಪಕ್ಷ ನಾಯಕ ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ರಾಜ್ಯ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಡಾ.ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ.

2023 ಕ್ಕೆ ಚುನಾವಣೆ ಬರುತ್ತೆ, ಯಾರು ಯಾರನ್ನು ಜೈಲಿಗೆ ಕಳಿಸ್ತಾರೆ ಎಂಬುದನ್ನು ನಾವೂ ನೋಡ್ತೀವಿ ಎಂದು ಸಚಿವ ಕೆ.ಸುಧಾಕರ್ ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಗ್ಯ ಸಚಿವ ಡಾ‌‌.ಸುಧಾಕರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಡ್ರಗ್ ಪೆಡ್ಲರ್ ಎಂದು ಕರೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ ನಳಿನ್ ಕುಮಾರ್ ಕಟೀಲ್ ಒಬ್ಬ ಅಪ್ರಬುದ್ಧ ರಾಜಕಾರಣ. ಕಟೀಲು ಒಬ್ಬ ಜೋಕರ್, ಅವನ ತಲೆ ಕೆಟ್ಟಿದೆ. ಹತಾಶರಾದಾಗ ಮಾತ್ರ ಅವಾಚ್ಯ ಶಬ್ದಗಳನ್ನ ಬಳಸುತ್ತಾರೆ. ನಾನು ಸಿ.ಎಂ.ಇಬ್ರಾಹಿಂ ಬಗ್ಗೆ ಏನೂ ಮಾತನಾಡಲ್ಲ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಉಪ ಚುನಾವಣೆ ಆಗಲೀ, ಸಾರ್ವತ್ರಿಕ ಚುನಾವಣೆಯೇ ಆಗಲಿ ಎಲ್ಲಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲುವಿಗಾಗಿ ಹೋರಾಟ ಮಾಡುತ್ತೇನೆ. ಕಳೆದ ಉಪಚುನಾವಣೆಯಲ್ಲಿ ಕೂಡ 15 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮಾಡಿದ್ದೆ. ನಮ್ಮ ಪಕ್ಷದ ಪ್ರತಿ ಅಭ್ಯರ್ಥಿಯ ಗೆಲುವು ನನಗೆ ಮುಖ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಲೆಯೇರಿಕೆ ವಿರುದ್ಧ ಜನರು ತಿರುಗಿ ಬೀಳುವವರೆಗೆ ನಿರಂತರವಾಗಿ ಸರ್ಕಾರಗಳು ಬೆಲೆ ಹೆಚ್ಚು ಮಾಡುತ್ತಲೇ ಇರುತ್ತವೆ. ವಿರೋಧ ಪಕ್ಷವಾಗಿ ನಾವು ಶಕ್ತಿಮೀರಿ ಹೋರಾಟ ಮಾಡುತ್ತಲೇ ಇದ್ದೇವೆ, ಜನ ಬೀದಿಗಳಿದಾಗ ಮಾತ್ರ ನಮ್ಮ ಹೋರಾಟಕ್ಕೆ ಬಲ ಬರುವುದು ಎಂದಿದ್ದಾರೆ.

ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ.ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು