ಕಿರಣ್ ಬೇಡಿ ವಿದಾಯದ ಟ್ವೀಟ್ | ನಿನ್ನೆ ಲೆಫ್ಟಿನೆಂಟ್ ಗರ್ವನರ್ ಹುದ್ದೆಯಿಂದ ವಜಾಗೊಂಡಿದ್ದ ಕಿರಣ್ ಬೇಡಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಪುದುಚೇರಿ(17-02-2021): ಪುದುಚೇರಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಬಿಕ್ಕಟ್ಟಿನ ಮಧ್ಯೆ ಕಳೆದ ರಾತ್ರಿ ಲೆಫ್ಟಿನೆಂಟ್-ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದು ಹಾಕಲಾಗಿದೆ.

ಇಂದು ಬೆಳಿಗ್ಗೆ ಕಿರಣ್ ಬೇಡಿ ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿದ ಜೀವಮಾನದ ಅನುಭವಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಅವರು ಹೇಳಿದರು. ನಾನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಕರ್ತವ್ಯಗಳನ್ನು ನಿರ್ವಹಿಸಿದ್ದೇನೆ. ನನಗೆ ಸಹಕಾರ ನೀಡಿ ಕೆಲಸ ಮಾಡಿದವರಿಗೂ ಈ ಸಂದರ್ಭದಲ್ಲಿ ಧನ್ಯವಾದ ಹೇಳುತ್ತೇನೆ ಎಂದು ಬೇಡಿ ತಿಳಿಸಿದ್ದಾರೆ. ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೆ ಉಜ್ವಲ ಭವಿಷ್ಯವಿದೆ. ಭವಿಷ್ಯವನ್ನು ರೂಪಿಸುವುದು ಜನರ ಕೈಯಲ್ಲಿದೆ  ಎಂದು ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು