ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜಿನಾಮೆ ನೀಡಬೇಕು : ಲಖನ್ ಜಾರಕಿಹೊಳಿ ಒತ್ತಾಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳಗಾವಿ : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿಯ ಪೋಷಕರೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇರವಾಗಿ ಆರೋಪಿಸಿದ ಮೇಲೆ ಅದು ಸತ್ಯ ಇರಲೇಬೇಕು. ಡಿ.ಕೆ.ಶಿವಕುಮಾರ್ ಅವರು ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ

ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಡಿಕೆಶಿ ವಿರುದ್ಧ ಆರೋಪಿಸಿದ್ದಾರೆ. ಸಿಡಿ ಕೇಸ್ ಪ್ರಕರಣ ಸಂಬಂಧವಾಗಿ ರಮೇಶ್ ಜಾರಕಿಹೊಳಿ ಅವರು ಪ್ರಕರಣದ ಮರುದಿನವೇ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ಡಿಕೆಶಿ ಅವರ ಹೆಸರು ಕೇಳಿಬರುತ್ತಿದೆ. ಆದರೂ ಅವರು ರಾಜೀನಾಮೆ ನೀಡುತ್ತಿಲ್ಲ.

ಕೆಪಿಸಿಸಿ ಸ್ಥಾನದಲ್ಲಿ ಮುಂದುವರೆಯುವುದರಿಂದ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಯ ಮೇಲೆ ಕಾಂಗ್ರೆಸ್ ಗೆ ಪರಿಣಾಮ ಬೀರಲಿದೆ. ‘ದುಷ್ಮನ್ ಕಹಾ ಹೈ ಅಂದರೆ ಬಗಲ್ ಮೆ ಹೈ’ ಎನ್ನುವಂತಿದೆ ನಮ್ಮ ಪರಿಸ್ಥಿತಿ ಎಂದರು. ನೈತಿಕ ಹೊಣೆ ಹೊತ್ತು ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಲಖನ್ ಜಾರಕಿಹೊಳಿ ಒತ್ತಾಯಿಸಿದ್ದಾರೆ

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು