ಬೆಂಗಳೂರು (10-02-2021): ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಮತ್ತೆ ಸಾರಿಗೆ ಸಿಬ್ಬಂದಿಗಳು ಪ್ರತಿಭಟನೆಯನ್ನು ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಬಿಎಂಟಿಸಿ ಕೇಂದ್ರ ಕಚೇರಿ ಎದುರು ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಲಿದೆ.
ವೇತನ ಪಾವತಿ, ಅಧಿಕಾರಿಗಳ ಕಿರುಕುಳ, ರಜೆಗಳ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ. ಆದರೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಯ ಇರುವುದಿಲ್ಲ.