ಬೆಂಗಳೂರು(05/11/2020): ರಾಜ್ಯ ಸರಕಾರವು ವಿದ್ಯುತ್ ದರವನ್ನು ಏರಿಕೆ ಮಾಡಿರುವುದನ್ನು ಮಾಡಿರುವ ಜೆಡಿಎಸ್ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಖಂಡಿಸಿದ್ದಾರೆ.
ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಅಗ್ರಹಿಸಿದ್ದಾರೆ.
ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಟ್ವೀಟ್ ಮಾಡಿದ್ದಾರೆ.
ಪ್ರತಿ ಯೂನಿಟ್ ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದ್ದು ಕೂಡಲೇ ಸರ್ಕಾರ ತಮ್ಮ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.