ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆ ಬುದ್ಧಿ ಬೆಳೆಯಬೇಕು, ಗರ್ವ ಇರಬಾರದು; ಸಿ.ಟಿ.ರವಿಗೆ ಕುಟುಕಿದ ಕುಮಾರಸ್ವಾಮಿ

kumaraswami
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(15/10/2020): ‘ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ಧಿ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರಿಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಗಳ ವ್ಯಂಗ್ಯವಾಡಿದ್ದಾರೆ.

‘ಸಿ.ಟಿ.ರವಿಯವರು ಮಂತ್ರಿ ಪದವಿ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡ ಕತ್ತರಿಸುವ ಆತಂಕದಿಂದ ಹಾಗೂ ಬಿಜೆಪಿಯಲ್ಲಿನ ವೈರುದ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗ್ಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

‘ಸಿ.ಟಿ.ರವಿಗೆ ಬಹುಶಃ ತನ್ನದೇ ಪಕ್ಷದಲ್ಲಿ ಹೆಮ್ಮರವಾಗುತ್ತಿರುವ ವಂಶವಾಹಿ ರಾಜಕಾರಣದ ವಿರುದ್ಧ ಕೋಪ ಇರಬೇಕು. ಅದಕ್ಕಾಗಿ ಈ ವಿಚಾರ ಕೆಣಕಿದ್ದಾರೆ ಎಂದೆನಿಸುತ್ತಿದೆ’ ಎಂದು ಕುಟುಕಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು