ಹೊಸದೆಹಲಿ(12/11/2020): ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಜೈಲು ಸೇರಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ತ್ವರಿತಗತಿಯಲ್ಲಿ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂ ಕೋರ್ಟ್ ನಡೆಯ ಕುರಿತು ಟ್ವೀಟ್ ಮಾಡಿದ್ದ ಖ್ಯಾತ ಹಾಸ್ಯ ಭಾಷಣಗಾರ ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗುವ ಸಾಧ್ಯತೆ ನಿಚ್ಛಳವಾಗಿದೆ.
ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅನುಮತಿ ನೀಡಿರುವುದು ವರದಿಯಾಗಿದೆ.
ಆತ್ಮಹತ್ಯೆಗೆ ಪ್ರಚೋಧನೆ ನೀಡಿದ್ದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ವಾರದ ಹಿಂದೆ ಮುಂಬೈ ಪೊಲೀಸರು ಬಂದಿಸಿದ್ದರು. ಹೈಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತ್ತು. ಗೋಸ್ವಾಮಿ ಸುಪ್ರೀಂ ಕೋರ್ಟ್ ಮೊರೆ ಹೋಗಿ ಜಾಮೀನು ಪಡೆದಿದ್ದರು. ಇದರ ಬಗ್ಗೆ ಕುಮಾಲ್ ಕಮ್ರಾ ಟ್ವೀಟ್ ಮಾಡಿದ್ದರು.