ಬೆಂಗಳೂರು(18/10/2020): ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಬಿಜೆಪಿ ಪ್ರಕರಣ ದಾಖಲಿಸಿರುವುದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ.
ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಪೊಲೀಸ್ ಪ್ರಕರಣ ದಾಖಲಿಸುವ ಮೂಲಕ ಬಿಜೆಪಿ ಮಹಿಳೆಯರ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡುತ್ತಿದೆ. ಆದರೆ, ಇದು ಕನಸಿನ ಮಾತು. ನಿಮ್ಮಿಂದ ಮಹಿಳೆಯರ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಸೋಲುವ ಭಯದಲ್ಲಿ ಇಂತಹ ಕೇಸ್ ದಾಖಲಿಸಿ ಬೆದರಿಸುವ ಪ್ರಯತ್ನ ಮಾಡುತ್ತಿರುವಿರಿ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಪರವಾಗಿ ಆರ್.ಆರ್. ನಗರ ಠಾಣೆ ಇನ್ಸ್ ಪೆಕ್ಟರ್ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಲಾಗಿದೆ.t