ರಾಂಚಿ (23-01-2021): ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ (72) ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ರಿಮ್ಸ್) ಬಹು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಾಲು ಪ್ರಸಾದ್ ಅವರಿಗೆ ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆ ಇದೆ. ಶುಕ್ರವಾರ ಅವರಿಗೆ ನ್ಯುಮೋನಿಯಾ ಇರುವುದು ಕಂಡುಬಂದಿದೆ. ಅವರ ವಯಸ್ಸನ್ನು ಪರಿಗಣಿಸಿ, ಉತ್ತಮ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ಅವರನ್ನು ಏಮ್ಸ್- ದೆಹಲಿಗೆ ಸ್ಥಳಾಂತರಿಸಲು ನಾವು ನಿರ್ಧರಿಸಿದ್ದೇವೆ ಎಂದು ರಿಮ್ಸ್ ನಿರ್ದೇಶಕ ಡಾ.ಕಮೇಶ್ವರ ಪ್ರಸಾದ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.