‘ಲವ್-ಜಿಹಾದ್’ ಕಾಯ್ದೆಯಿಂದ ಹಿಂದೆ ಸರಿದ ರಾಜ್ಯ ಸರಕಾರ| ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

yadiyoorappa
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(08-12-2020): ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ‘ಲವ್-ಜಿಹಾದ್’ ವಿರುದ್ಧ ಕಾನೂನು ಪರಿಚಯಿಸುತ್ತೇವೆ, ಇನ್ನೆರಡು ದಿನಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಸರ್ಕಾರ ಲವ್-ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲಿದೆ. ನಾವು ಈ ಹಿಂದೆ ಗೋಹತ್ಯೆ ನಿಷೇಧ ಮಸೂದೆಯನ್ನು ಪರಿಚಯಿಸಿದ್ದೆವು ಆದರೆ ರಾಜ್ಯಪಾಲರು ಅದನ್ನು ವಾಪಸ್ ಕಳುಹಿಸಿದ್ದಾರೆ. ಪ್ರಸ್ತುತ ಅಧಿವೇಶನದಲ್ಲಿ ಅದನ್ನು ಪರಿಚಯಿಸಲು ನಾನು ಕಾನೂನು ಸಚಿವರನ್ನು ಕೇಳಿದ್ದೇನೆ. ಬಹುಶಃ ಅವರು ನಾಳೆ ಮಸೂದೆಯನ್ನು ಪರಿಚಯಿಸಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ರಾಜ್ಯ ಸರ್ಕಾರವು ಉತ್ತರ ಪ್ರದೇಶ, ಗುಜರಾತ್ ಮತ್ತು ಮಧ್ಯಪ್ರದೇಶದ ಮಾದರಿಯ ಗೋಹತ್ಯೆ ಮಸೂದೆಯನ್ನು ಜಾರಿಗೆ ತರಲಿದೆ ಎಂದು  ಸಚಿವ ಆರ್.ಅಶೋಕ್ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು