ಲಾಕ್ ಡೌನ್ ವಿಸ್ತರಣೆ ಬಗ್ಗೆ ಒಲವು ತೋರಿದ ಸಿಎಂ: ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಬಡ ಜನತೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕರ್ನಾಟದಲ್ಲಿ ಮೇ 24 ಕ್ಕೆ ಲಾಕ್‌ಡೌನ್‌ ಮುಕ್ತಾಯವಾಗಲಿದೆ. ಆದರೆ ನಿರೀಕ್ಷೆಯಂತೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿಲ್ಲ. ಕೆಲವು ರಾಜ್ಯಗಳಲ್ಲಿ ಈಗಾಗಲೇ ಮೇ ಅಂತ್ಯದವರೆಗೆ ಲಾಕ್ ಡೌನ್ ವಿಸ್ತರಿಸಿದ್ದಾರೆ. ಕರ್ನಾಟಕದಲ್ಲೂ ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡುವುದು ಬಹುತೇಕ ನಿಶ್ಚಿತವಾಗಿದ್ದು, ಈ ಬಗ್ಗೆ ಮಹತ್ವದ ಮಾಹಿತಿಯನ್ನು ಸಿಎಂ ಬಿಎಸ್‌ವೈ ಹೇಳಿದ್ದಾರೆ.

ಸಿಎಂ ನೇತೃತ್ವದಲ್ಲಿ ನಡೆದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉನ್ನತ ಮಟ್ಟದ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಾಕ್‌ಡೌನ್‌ವಿಸ್ತರಣೆ ಸಂಬಂಧಪಟ್ಟಂತೆ ಇನ್ನು ಚರ್ಚೆಯಾಗುತ್ತಿದ್ದು, ಇನ್ನೆರಡು ದಿವಸದಲ್ಲಿ ಎಷ್ಟು ದಿನಗಳ ಕಾಲ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕು ಎನ್ನುವ ಬಗ್ಗೆ ಮಾಹಿತಿ ನೀಡಲಾಗುವುದು ಅಂತ ಸಿಎಂ ಮುನ್ಸೂಚನೆ ನೀಡಿದರು.

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಆಗುವುದು ಬಹುತೇಕ ಖಚಿತವಾಗಿದೆ. ಆದರೆ ಲಾಕ್ ಡೌನ್ ವಿಸ್ತರಿಸಿದರೆ ಬೀದಿ ಬದಿ ವ್ಯಾಪಾರಿಗಳಿಗ, ಆಟೋ ಚಾಲಕರಿಗೆ, ಕುಲ ಕಸುಬುದಾರರಿಗೆ, ಕಾರ್ಮಿಕರಿಗೆ, ಅಸಂಘಟಿತ ಕೂಲಿಕಾರರಿಗೆ ಆರ್ಥಿಕ ನೆರವು ಒದಗಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಕೇರಳ, ತಮಿಳುನಾಡು, ದೆಹಲಿ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಬಡ ಜನತೆಗೆ ಅಲ್ಲಿನ ಸರ್ಕಾರ ವಿಶೇಷ ಆರ್ಥಿಕ ನೆರವು ಒದಗಿಸಿದೆ. ಹೀಗಾಗಿ ಲಾಕ್ ಡೌನ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡು ಜೀವನ ನಿರ್ವಹಣೆಗೆ ಪರದಾಡುತ್ತಿರುವ ರಾಜ್ಯದ ಬಡ ಜನತೆಗೆ ಸರ್ಕಾರ ನೆರವಾಗಲು ಒದಗಿಸುವ ಬಗ್ಗೆ ಸಿಎಂ ಚಿಂತನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹತ್ತು ಕೆಜಿ ಅಕ್ಕಿ ಉಚಿತವಾಗಿ ನೀಡಲು ಸರ್ಕಾರ ಮುಂದಾಗಿದೆ, ಈ ಬೆನ್ನಲ್ಲೇ ಆರ್ಥಿಕ ನೆರವು ನೀಡಲು ಸರ್ಕಾರ ಒಲವು ತೋರಿದೆ ಎನ್ನಲಾಗಿದೆ. ಬಡ ಕೂಲಿಕಾರರು, ಅಸಂಘಟಿತ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಿಗಳು ಸರ್ಕಾರದ ವಿಶೇಷ ಆರ್ಥಿಕ ಪ್ಯಾಕೇಜ್ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಸಿಎಂ ಬಿಎಸ್ ವೈ ಇಂದು ಅಥವಾ ನಾಳೆ ಈ ಬಗ್ಗೆ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು