ಲಾಕ್ ಡೌನ್ ವಿಸ್ತರಿಸುವ ಬಗ್ಗೆ ತಜ್ಞರು ಯಾವುದೇ ವರದಿ ನೀಡಿಲ್ಲ: ಸಿಎಂ ಬಿ.ಎಸ್.ವೈ.

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಕೋವಿಡ್ -19 ರ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕಾವೇರಿ ನಿವಾಸದಲ್ಲಿ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು ಒಂದೆರಡು ದಿನಗಳಲ್ಲಿ ಎರಡನೇ ಆರ್ಥಿಕ ಪ್ಯಾಕೇಜ್ ಘೋಷಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್ 7 ಕ್ಕೆ ಮುಗಿಯುವ ಲಾಕ್ ಡೌನ್ ಮುಂದುವರೆಸುವ ಬಗ್ಗೆ ತಿಳಿಸಿದ ಅವರು ಜೂನ್ 5, 6 ರ ವೇಳೆಗೆ ರಾಜ್ಯದ ಕೊರೊನಾ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡುತ್ತೇವೆ. ತಜ್ಞರ ಜೊತೆ, ಸಚಿವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಲಾಕ್‍ಡೌನ್ ವಿಸ್ತರಿಸುವ ಬಗ್ಗೆ ತಜ್ಞರು ಸದ್ಯಕ್ಕೆ ಯಾವುದೇ ವರದಿ ಕೊಟ್ಟಿಲ್ಲ. ಲಾಕ್‍ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೊರೊನಾ ಪಾಸಿಟಿವ್ ರೇಟ್ ಇಳಿಮುಖವಾದರೆ ಅನ್ ಲಾಕ್ ಮಾಡುವ ಬಗ್ಗೆ ಸುಳಿವು ನೀಡಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು