ದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿರ್ಲಾ ನಿನ್ನೆ ಶನಿವಾರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಕೋವಿಡ್ ಪಾಸಿಟಿವ್ ಇರುವುದು ಗೊತ್ತಾದ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದೇವೆ. ಅವರ ಆರೋಗ್ಯಸ್ಥಿತಿ ಸ್ಥಿರವಾಗಿದೆ ಎಂದು ಏಮ್ಸ್ ಮುಖ್ಯಸ್ಥರು ಮಾಹಿತಿ ರವಾನಿಸಿದ್ದಾರೆ.