ಕರ್ನಾಟಕದ ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಇಂಗ್ಲೀಷ್, ವಿಜ್ಞಾನ, ಗಣಿತ ಬೋಧನೆ ಕಡ್ಡಾಯವಾಗಲಿದೆ!

madarasa
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(07-01-2021): ಇನ್ನು ಮುಂದೆ ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣ ನೀಡಲಾಗುವುದು ಎಂದು ಅಲ್ಪಸಂಖ್ಯಾತ ಇಲಾಖೆ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದಾರೆ.

ಕರ್ನಾಟಕದ ಮದರಸಾಗಳಲ್ಲಿ ಧಾರ್ಮಿಕ ಬೋಧನೆಯ ಜೊತೆಗೆ ಇಂಗ್ಲೀಷ್, ವಿಜ್ಞಾನ, ಗಣಿತ ಪಠ್ಯವನ್ನು ಬೋಧಿಸಲಾಗುತ್ತದೆ. ಶಿಕ್ಷಣ ಮುಗಿಸಿ ಬರುವ ಮಕ್ಕಳು ಐಟಿಐನಂತಹ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಎಸ್‌ಎಸ್‌ಎಲ್ಸಿ ತತ್ಸಮಾನ ಆಧುನಿಕ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯದ ಮಕ್ಕಳಿಗೆ ಉದ್ಯೋಗ ಆಧಾರಿತ ಶಿಕ್ಷಣ ನೀಡಲಾಗುವುದು. ರಾಜ್ಯದಲ್ಲಿ ಸುಮಾರು 800ಕ್ಕೂ ಹೆಚ್ಚು ಮದರಸಾಗಳಿದ್ದು ಎಲ್ಲರಿಗೂ  ಆಧುನಿಕ ಶಿಕ್ಷಣ ನೀಡಲಾಗುವುದು ಎಂದು ಹೇಳಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು