ಮದುವೆ ಸಮಾರಂಭಗಳಿಗೆ ‘ಜಿಲ್ಲಾಧಿಕಾರಿ ಅನುಮತಿ ಪಾಸ್’ ಕಡ್ಡಾಯ : ರಾಜ್ಯ ಸರ್ಕಾರ ಸೂಚನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಗಟ್ಟಲು ಸರ್ಕಾರ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದೆ‌. ಇದೀಗ ಮದುವೆ ಸಮಾರಂಭಗಳಿಗೂ ಜಿಲ್ಲಾಧಿಕಾರಿಯ ಅನುಮತಿ ಕಡ್ಡಾಯಗೊಳಿಸಿದ್ದು, ಅನುಮತಿ ನೀಡುವ ಸಂದರ್ಭದಲ್ಲಿಯೇ ಒಳಾಂಗಣ ಕಾರ್ಯಕ್ರಮಕ್ಕೆ 100, ಹೊರಾಂಗಣಕ್ಕೆ 200 ಜನರಿಗೆ ಪಾಸ್‌ ನೀಡಲಾಗುವುದು ಎಂದು ಸೂಚಿಸಿದೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿಯನ್ನು ಅವಲೋಕನೆ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಜೊತೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ನಡೆದ ಬಳಿಕ ಕಂದಾಯ ಸಚಿವ ಆರ್‌. ಅಶೋಕ, ಈ ವಿಷಯ ಕುರಿತು ಮಾಹಿತಿ ನೀಡಿದ್ದಾರೆ.

ಸರ್ಕಾರದ ನಿಯಮ ಉಲ್ಲಂಘಿಸಿದ ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ಹಾಗೂ ಅವುಗಳನ್ನುಲಾಕ್ ಮಾಡಿಸಿ ಸೀಲ್ ಹಾಕಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್ ಎಚ್ಚರಿಕೆ ನೀಡಿದರು.

ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ಯಾವುದೇ ರೀತಿಯ ಕೊರತೆ ಇಲ್ಲದಂತೆ ಸೂಕ್ತ ವ್ಯವಸ್ಥೆ ಒದಗಿಸಬೇಕು. ಕೋವಿಡ್‌ ನಿರ್ವಹಣೆಗಾಗಿ ಅಗತ್ಯ ಹಣ ಬಿಡುಗಡೆ ಮಾಡಲಾಗುವುದು. ಕೊರೊನಾ ಸೋಂಕಿನಿಂದ ಮೃತಪಟ್ಟವರ ಗೌರವಯುತ ಅಂತ್ಯಸಂಸ್ಕಾರಕ್ಕೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜಕೀಯ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೂ ಈ ನಿಯಮ ಅನ್ವಯಿಸಿದ್ದು, ಅವರೂ ಪಾಸ್ ತೆಗೆದುಕೊಳ್ಳಬೇಕು, ಸೋಂಕು ತಡೆಗಟ್ಟಲು ಜನಸಂದಣಿ ಹೆಚ್ಚಿರುವ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಈ ನಿಯಮಗಳನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈಗಾಗಲೇ ಕಲ್ಯಾಣ ಮಂಟಪ ಬುಕ್ ಆಗಿರುವ ಮದುವೆಗಳಿಗೆ ಪಾಸ್ ನಿಯಮ ಅನ್ವಯಿಸುವುದಿಲ್ಲ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು