ಮದುವೆ ಸಮಾರಂಭಕ್ಕೆ 40 ಜನರ ಮಿತಿ, ಅನುಮತಿ ಪಾಸ್ ಕಡ್ಡಾಯ: ಸರ್ಕಾರ ಆದೇಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೋವಿಡ್ ಎರಡನೇ ಅಲೆಯ ತೀವ್ರತೆ ತಗ್ಗಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಈಗಾಗಲೇ ವ್ಯಾಪಾರ ವಹಿವಾಟು ನಡೆಸಲು ಸಡಿಲಿಕೆ ನೀಡಿರುವ ಸರ್ಕಾರ ಇದೀಗ 40 ಜನರಿಗೆ ಮಿತಿಗೊಳಿಸಿ ರಾಜ್ಯದಾದ್ಯಂತ ಕಲ್ಯಾಣ ಮಂಟಪ, ಹೋಟೆಲ್‌ ಸಭಾಂಗಣ ಮತ್ತು ರೆಸಾರ್ಟ್‌ಗಳಲ್ಲಿ ಮದುವೆ ಸಮಾರಂಭಗಳನ್ನು ನಡೆಸಲು ಸೋಮವಾರದಿಂದ ಅನುಮತಿ ನೀಡಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ರೂಪಾಂತರಿ ಡೆಲ್ಟಾ ಕೊರೊನಾ ವೈರಾಣು ನಿಯಂತ್ರಣ ಕುರಿತು ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ಆದೇಶ ಹೊರಡಿಸಲಾಗಿದೆ. ಪಾಸ್‌ ಹೊಂದಿರುವವರು ಮಾತ್ರ ಮದುವೆ ಸಮಾರಂಭದಲ್ಲಿ ಭಾಗವಹಿಸಬೇಕು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಂಡ ಎಲ್ಲರೂ ಕಡ್ಡಾಯವಾಗಿ ಕೋವಿಡ್‌ ಮಾರ್ಗಸೂಚಿ ಪಾಲಿಸಬೇಕು ಎಂದು ಆದೇಶಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಜಂಟಿ ಆಯುಕ್ತರು ಮತ್ತು ಇತರ ಪ್ರದೇಶಗಳಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್‌ಗಳಿಂದ ಮದುವೆ ಸಮಾರಂಭಗಳಿಗೆ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು