ಕೊರೊನಾ ಅಟ್ಟಹಾಸ: ಕೊರೊನಾಗೆ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ನಿಧನ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೋನಾ ಮಾಹಾಮಾರಿಗೆ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್(65) ಇಂದು ನಿಧನರಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ಅವರು ಕಾರ್ಯ ನಿರ್ವಹಿಸಿದ್ದರು.

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ತಗಲಿದ ಹಿನ್ನೆಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದ ಅವರು ‘ಈ ಭಾನುವಾರ’ ಪತ್ರಿಕೆ ಸಂಪಾದಕರಾಗಿದ್ದರು. ವಿವಿಧ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು. ಉತ್ತಮ ರಾಜಕೀಯ ವಿಶ್ಲೇಷಕರಾಗಿ, ಬರಹಗಾರರಾಗಿ ಗುರುತಿಸಿಕೊಂಡಿದ್ದ ಅತ್ಯುತ್ತಮ ಸಂಘಟಕರಾಗಿದ್ದರು.

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ವೈ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು