ಮೈಸೂರು(10-02-2021): ಮಹಾರಾಜ ಕಾಲೇಜಿನಲ್ಲಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ವಿಶಾಲ್, ಸಲೀಂ ಪಾಶಾ, ಯಶ್ವಂತ್ ಎಂದು ಗುರುತಿಸಲಾಗಿದೆ. ಮಹಾರಾಜ ಕಾಲೇಜಿನ ನ್ಯಾಯ ವಿಜ್ಞಾನ ಮತ್ತು ಅಪರಾಧ ಶಾಸ್ತ್ರ ವಿಭಾಗದಲ್ಲಿ ಪಾಠ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪಾಠ ನಡೆಯುತ್ತಿದ್ದ ವೇಳೆ ತರಗತಿಯಲ್ಲಿ 24 ಮಂದಿ ವಿದ್ಯಾರ್ಥಿಗಳಿದ್ದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.