ಸಿಬಿಐ “ಪಾನ್ ಶಾಪ್” ನಂತಾಗಿದೆ ಎಂದ ಮಹಾರಾಷ್ಟ್ರ ಸಚಿವ

Aslam Shaikh
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ(20-11-2020): ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಕಡ್ಡಾಯವಾಗಿದೆ ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮಹಾರಾಷ್ಟ್ರ ಸಚಿವ ಅಸ್ಲಂ ಶೇಖ್, ಸಿಬಿಐ ಬಿಜೆಪಿ ಸರ್ಕಾರದ ಅಧೀನದಲ್ಲಿರುವ ‘ಪಾನ್ ಶಾಪ್’ನಂತೆ ಮಾರ್ಪಟ್ಟಿದೆ ಎಂದು ಹೇಳಿದರು.

ಸಿಬಿಐ ಎಲ್ಲಿಯಾದರೂ ಹೋಗಿ ಬಿಜೆಪಿ ಅಲ್ಲದ ಆಳ್ವಿಕೆ ಹೊಂದಿರುವ ರಾಜ್ಯಗಳಲ್ಲಿ ಪ್ರಕರಣ ದಾಖಲಿಸಿ ಸಿಎಂಗಳು ಮತ್ತು ಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ರಾಜಕೀಯ ಲಾಭಕ್ಕಾಗಿ ಏಜೆನ್ಸಿಯನ್ನು ದುರುಪಯೋಗಪಡಿಸಿಕೊಂಡಿದ್ದರಿಂದ ರಾಜ್ಯದಲ್ಲಿ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ನೀಡಿದ ಸಾಮಾನ್ಯ ಒಪ್ಪಿಗೆಯ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಸ್ವಾಗತಿಸಿದರು.

ಸಿಬಿಐ  ಬಿಜೆಪಿ ಆಡಳಿತವಿಲ್ಲದ ರಾಜ್ಯಗಳಲ್ಲಿ ಸಿಎಂಗಳು ಮತ್ತು ಮಂತ್ರಿಗಳ ವಿರುದ್ಧ ಕ್ರಮ ಕೈಗೊಂಡಿದೆ. ಯಾವುದೇ ತನಿಖೆ ನಡೆಸಲು ಸಿಬಿಐಗೆ ರಾಜ್ಯಗಳಿಂದ ಪೂರ್ವಾನುಮತಿ ಬೇಕು ಎಂದು ಹೇಳುವ ಮಾನ್ಯ ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು