ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ: 15 ದಿನ ಲಾಕ್ ಡೌನ್ ಆಗುವ ಸಾಧ್ಯತೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ : ಮುಂಬೈ ಹಾಗೂ ಮಹಾರಾಷ್ಟ್ರ ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಹಲವು ನಿರ್ಬಂಧಗಳನ್ನು ಜಾರಿಗೊಳಿಸಿದರೂ ಸೋಂಕು ಪ್ರಕರಣಗಳು ಇನ್ನೂ ಹೆಚ್ಚುತ್ತಿವೆ. ಈ ಮಾರಣಾಂತಿಕ ವೈರಸ್ ಹರಡುವುದನ್ನು ತಡೆಯಲು ಸಿಎಂ ಉದ್ಧವ್ ಠಾಕ್ರೆ ಶೀಘ್ರದಲ್ಲೇ ರಾಜ್ಯದಲ್ಲಿ 15 ದಿನಗಳ ಸಂಪೂರ್ಣ ಲಾಕ್ ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬೀದಿದ್ದೆ.

ಈ ಕುರಿತು ಸಿಎಂ ಠಾಕ್ರೆ ಕೋವಿಡ್ ಟಾಸ್ಕ್ ಪೋರ್ಸ್ ಜೊತೆ ಸಭೆ ನಡೆಸಿದ ನಂತರ ಈ ಬಗ್ಗೆ ಇಂದು ಅಥವಾ ನಾಳೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ನಿನ್ನೆ ಸಿಎಂ ಠಾಕ್ರೆ ಸರ್ವಪಕ್ಷ ಸಭೆ ನಡೆಸಿ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್‌ಡೌನ್ ಹೇರುವುದು ಮುಖ್ಯವಾಗಿದೆ. ಕೊರೊನಾ ತಡೆಗಟ್ಟಲು ಬೇರೆ ಮಾರ್ಗಗಳಿಲ್ಲ. ‘ನಮ್ಮಲಿ ಉಳಿದಿರುವ ಏಕೈಕ ಮಾರ್ಗ ಅದೇ ಮತ್ತೆ ‘ಲಾಕ್ ಡೌನ್’ ಹೇರುವುದು ಎಂದು ಠಾಕ್ರೆ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು