ಮಹಾರಾಷ್ಟ್ರ : ಪರೀಕ್ಷೆ ಇಲ್ಲದೆ 1- 8ನೇ ತರಗತಿ ಮಕ್ಕಳಿಗೆ ಪಾಸ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ: ಪರೀಕ್ಷೆ ಇಲ್ಲದೇ 1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಬಗ್ಗೆ ಇಂದು ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ಈ ಕುರಿತು ಇಂದು ಅಧಿಕೃತ ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ಬಡ್ತಿ ನೀಡುವ ಬಗ್ಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಒಂದರಿಂದ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಮುಂದಿನ ತರಗತಿಗೆ ಬಡ್ತಿ ನೀಡಲಾಗಿದೆ. 9 ಮತ್ತು 11 ನೇ ತರಗತಿಗಳಿಗೆ ಪರೀಕ್ಷೆ ನಡೆಸುವ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಈ ಕುರಿತಾಗಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು. 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಈಗಾಗಲೇ ಸರ್ಕಾರ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಸಚಿವೆ ವರ್ಷಾ ಗಾಯಕವಾಡ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು