ಮಾಜಿ ಸಿಎಂ ಕುಮಾರಸ್ವಾಮಿಗೆ ಸಿಗದೇ ಹೋದ ಬೆಡ್ ಸಾಮಾನ್ಯರಿಗೆ ಸಿಗುವುದೇ? : ಸಾರ್ವಜನಿಕರ ಪ್ರಶ್ನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದರು, ಆದರೆ ಬೆಡ್ ಸಿಕ್ಕಿಲ್ಲ. ರಾಜ್ಯದ ಮಾಜಿ ಮುಖ್ಯಮಂತ್ರಿಗಳಿಗೆ, ಪ್ರಭಾವಿ ನಾಯಕರಿಗೇ ಈ ಸ್ಥಿತಿ ಎದುರಾದರೆ ಸೋಂಕು ತಗಲಿರುವ ಬಡ ಸಾಮಾನ್ಯ ಜನರು ಚಿಕಿತ್ಸೆಗಾಗಿ ಬೆಡ್ ಪಡೆಯಲು ಅದೆಷ್ಟು ಕಷ್ಟ ಪಡಬೇಕು? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕಾಗಿ ಕಲ್ಯಾಣದಲ್ಲಿ ವಾಸ್ತವ್ಯ ಮಾಡಿದ ಕುಮಾರಸ್ವಾಮಿಗೆ ಶುಕ್ರವಾರ ಸಂಜೆ ದಣಿವು, ಜ್ವರ ಕಾಣಿಸಿಕೊಂಡಿದೆ. ಹೀಗಾಗಿಯೇ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಆದರೆ ಮನೆಗೆ ಹೋಗದೆ ಖಾಸಗಿ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ.
ಇಂದು ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಧೃಢಪಟ್ಟಿದೆ.

ಕೊರೊನಾ ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ವೈದ್ಯರ ಬಳಿ ಮಾತುಕತೆ ನಡೆಸಿ,ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರೆ, ಆದರೆ ವೈದ್ಯರು ಅದನ್ನೊಪ್ಪಿಲ್ಲ. ಈ ವಿಷಯದಲ್ಲಿ ನಿರ್ಲಕ್ಷ್ಯ ಬೇಡ, ತಕ್ಷಣವೇ ಆಸ್ಪತ್ರೆಗೆ ಅಡ್ಮಿಟ್ ಆಗುವಂತೆ ವೈದ್ಯರು ತಾಕೀತು ಮಾಡಿದ್ದಾರೆ. ಈ ಕುರಿತು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ.

ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆ ಮಾಡಿ ಬೆಡ್ ಸಪಡೆದಿದ್ದಾರೆ. ಆದರೆ ಇನ್ನೂ ಆಸ್ಪತ್ರೆಗೆ ದಾಖಲಾಗಿಲ್ಲ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಇಂದು ಅವರು ಹಾಜರಾಗಲೇ ಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋಗಿಲ್ಲ, ಕೊರೋನಾ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣದಲ್ಲಿ ಭಾಗಿಯಾಗಿ ನಂತರ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು