ಮಾಜಿ ಕ್ರಿಕೆಟಿಗ ಸಚಿವ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ : ಭಾರತೀಯ ತಂಡದ ಮಾಜಿ ಕ್ರಿಕಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೊನಾ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಚಿನ್ ತೆಂಡೂಲ್ಕರ್ ಗೆ ಕೆಲ ದಿನಗಳ ಹಿಂದೆ ಕೊರೊನಾ ದೃಢಪಟ್ಟಿತ್ತು. ಹೊಂ ಕ್ವಾರಂಟೈನ್ ನಲ್ಲಿದ್ದರು. ಇದೀಗ ವೈದ್ಯರ ಸಲಹೆ ಮೇರೆಗೆ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಸಚಿನ್ ತೆಂಡೂಲ್ಕರ್ ಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್ , ನಿಮ್ಮ ಪ್ರಾರ್ಥನೆಗಳಿಗೆ ಧನ್ಯವಾದಗಳು. ವೈದ್ಯಕೀಯ ಸಲಹೆ ಮೇರೆಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೆ. ಕೆಲವು ದಿನಗಳಲ್ಲಿ ಮನೆಗೆ ಮರಳುತ್ತೇನೆ. ಎಲ್ಲರೂ ಸುರಕ್ಷಿತವಾಗಿರಿ,

ಭಾರತದ ವಿಶ್ವಕಪ್ ಗೆಲುವಿನ 10 ನೇ ವಾರ್ಷಿಕೋತ್ಸವದಂದು ಎಲ್ಲಾ ಭಾರತೀಯರು ಮತ್ತು ನನ್ನ ತಂಡದ ಆಟಗಾರರಿಗೆ ಶುಭ ಹಾರೈಸಿದರು ಎಂದು ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು