ತಮಿಳುನಾಡು : ಕರ್ನಾಟಕದ ಸಿಂಗಂ ಎಂದು ಖ್ಯಾತಿ ಪಡೆದಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇತ್ತೀಚೆಗೆ ಹುದ್ದೆಗೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ್ದರು.
ಇದೀಗ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆಯ ಹೊತ್ತಿನಲ್ಲಿ ಕರೂರು ಅರವ ಕುರಚಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಪ್ರಧಾನಿ ಮೋದಿಯವರ ಅಪ್ಪಟ ಅಭಿಮಾನಿಯಾಗಿದ್ದ ಇವರು ಕಳೆದ ಆಗಸ್ಟ್ ನಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.ಆ ಬಳಿಕ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ವಿಸ್ತರಣಾ ಕಾರ್ಯದಲ್ಲಿ ಸಕ್ರಿಯರಾದರು.ಇದೀಗ ತಮಿಳುನಾಡಿನ ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.