ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು : ಸಚಿವ ಬೈರತಿ ಬಸವರಾಜ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳಗಾವಿ: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಸಚಿವ ಬೈರತಿ ಬಸವರಾಜ್​ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಸದ್ಯ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾದ ಬಳಿಕ ರಮೇಶ್​ ಚುನಾವಣೆ ಪ್ರಚಾರಕ್ಕೆ ಬರುತ್ತಾರೆ. ಪ್ರಚಾರಕ್ಕೆ ಬರುವಂತೆ ಕರೆ ಮಾಡಿದಾಗ ನನಗೆ ಕೊರೊನಾ ದೃಢಪಟ್ಟ ವಿಚಾರ ತಿಳಿಯಿತು ಎಂದು ಸಚಿವ ಬೈರತಿ ಬಸವರಾಜ್​ ಹೇಳಿದ್ದಾರೆ.

ರಾಸಲೀಲೆ ಸಿ.ಡಿ ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್​ ಜಾರಕಿಹೊಳಿ ಅವರಿಗೆ ಎಸ್​ಐಟಿ ನೋಟಿಸ್​ ನೀಡಿತ್ತು. ಸದ್ಯ ಕೊರೊನಾ ದೃಢಪಟ್ಟಿರುವ ಹಿನ್ನೆಲೆ ಅವರು ಇಂದು ವಿಚಾರಣೆಗೆ ಗೈರಾಗಲಿದ್ದಾರೆ ಎನ್ನಲಾಗುತ್ತಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು