ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಅವರು ಇಂದು ವಿಧಿವಶರಾಗಿದ್ದಾರೆ.

ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೃಷ್ಣ ಅವರು ಮೈಸೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೃಷ್ಣ ಅವರು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದವರು,
ಕೃಷ್ಣ ಅವರು ಮೂರು ಬಾರಿ ಕೆಆರ್ ಪೇಟೆ ಕ್ಷೇತ್ರದಿಂದ ಶಾಸಕರಾಗಿದ್ದು 1996ರಲ್ಲಿ ಮಂಡ್ಯದ ಸಂಸದರಾಗಿ ಆಯ್ಕೆಯಾಗಿದ್ದರು.

ಮೇಷ್ಟ್ರು ಎಂದು ಖ್ಯಾತಿ ಹೊಂದಿರುವ ಕೃಷ್ಣ ಅವರು 1988ರಲ್ಲಿ ಎಸ್ ಆರ್ ಬೊಮ್ಮಾಯಿ ಸಂಪುಟದಲ್ಲಿ ಪಶುಸಂಗೋಪನೆ ಮತ್ತೆ ರೇಷ್ಮೆ ಸಚಿವರಾಗಿದ್ದ ಅವರು 2006ರಿಂದ 2008ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

 

ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು