ಮಲತಂದೆಯ ಅತ್ಯಾಚಾರದಿಂದ ಗರ್ಭಿಣಿಯಾದ ಬಾಲಕಿ

kerala news
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಲಪ್ಪುರಂ:  ಮಲತಂದೆಯೋರ್ವ  14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಇದೀಗ ಬಾಲಕಿ ಗರ್ಭಿಣಿಯಾದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ತಿರುರ್ ಕಲ್ಪಕಾಂಚೇರಿಯಲ್ಲಿ ಈ ಘಟನೆ ನಡೆದಿದ್ದು,  ಬಾಲಕಿ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋಗಿದ್ದು, ಈ ವೇಳೆ ಬಾಲಕಿ ಗರ್ಭಿಣಿ ಎನ್ನುವುದು ತಿಳಿದು ಬಂದಿದೆ. ಬಾಲಕಿಯನ್ನು ವಿಚಾರಿಸಿದಾಗ ಮಲತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿರುವುದು ತಿಳಿದು ಬಂದಿದೆ.

ಸಂತ್ರಸ್ತ ಬಾಲಕಿಯು ತನ್ನ ತಾಯಿಯೊಂದಿಗೆ  ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಇದೇ ಮನೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು