ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸಹೋದರ ಕೋವಿಡ್ ತಗುಲಿ ಮೃತ್ಯು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹೋದರ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ.

ಆಶಿಮ್ ಬ್ಯಾನರ್ಜಿ ಎಂಬ ಹೆಸರಿನ ಮಮತಾ ಬ್ಯಾನರ್ಜಿಯ ಕಿರಿಯ ಸಹೋದರ, ಕೋವಿಡ್ ತಗುಲಿ ಕೊಲ್ಕತ್ತಾದ ಮೆಡಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸರಿ ಸುಮಾರು ಒಂದು ತಿಂಗಳ ಹಿಂದೆ ಅವರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿತ್ತು.

ಪಶ್ಚಿಮ ಬಂಗಾಳದಲ್ಲೂ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿದ್ದು, ನಿನ್ನೆ ಒಂದೇ ದಿನದಲ್ಲಿ ದಾಖಲೆಯ 20,846 ಹೊಸ ಪ್ರಕರಣಗಳು ದಾಖಲಾಗಿವೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು