ಪುದುಚೇರಿ(05-02-2021): 5 ಕೋಟಿ ಕೊಟ್ಟರೆ ಪ್ರಧಾನಿ ನರೇಂದ್ರ ಮೋದಿಯನ್ನು ಕೊಲ್ಲುವುದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ.
43 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಸತ್ಯಾನಂದಂ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಆರ್ಯನ್ಕುಪ್ಪಂ ಗ್ರಾಮದ ನಿವಾಸಿ ಎನ್ನಲಾಗಿದೆ. ಬಂಧನದ ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ.
ಬಂಧಿತರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 505 (1) ಮತ್ತು 505 (2) ಅಡಿಯಲ್ಲಿ ಕೇಸ್ ದಾಖಲಾಗಿದೆ. ಈತ ಫೋಸ್ಟ್ ಹಾಕಿರುವ ಬಗ್ಗೆ ಕಾರು ಚಾಲಕನೋರ್ವ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.