ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಚ್ಚಿ ಕೊಂದು ದೆವ್ವಕ್ಕೆ ದೂರ ಹಾಕಿದ ಭೂಪ!

crime
Share on facebook
Share on twitter
Share on linkedin
Share on whatsapp
Share on telegram
Share on email
Share on print

ಪಾಟ್ನಾ (01-12-2020):  ಪತ್ನಿ ಮತ್ತು ಐವರು ಮಕ್ಕಳನ್ನು ವ್ಯಕ್ತಿಯೋರ್ವ ಕೊಡಲಿಯಿಂದ ಕೊಚ್ಚಿ ಹಾಕಿದ್ದು ನಾಲ್ವರು ಮೃತಪಟ್ಟಿರುವ ಬೆಚ್ಚಿಬೀಳಿಸುವ ಘಟನೆ ಪಾಟ್ನಾದಲ್ಲಿ ನಡೆದಿದೆ.

ಅವಧೇಶ್ ಚೌಧರಿ ಎಂಬ ವ್ಯಕ್ತಿ ಈ ದುಷ್ಕೃತ್ಯ ಎಸಗಿದ್ದಾನೆ. ಕ್ಷುಲ್ಲಕ ವಿಷಯಕ್ಕೆ ಪತ್ನಿ ಜೊತೆ ಜಗಳವಾಡಿ ಕೋಪಗೊಂಡ ಅವಧೇಶ್ ಮನೆಯಲ್ಲಿದ್ದ ಕೊಡಲಿಯಿಂದ ಎಲ್ಲರ ಮೇಲೆ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ನಾಲ್ಕು ಮಕ್ಕಳು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ಘಟನೆ ಬಗ್ಗೆ ತಿಳಿದ ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಅವಧೇಶ್ ಮಾತ್ರ ತನಗೆ ಏನೂ ಗೊತ್ತಿಲ್ಲ. ದೆವ್ವ ಬಂದಂತಾಗಿದೆ. ದೆವ್ವ ಎಲ್ಲರನ್ನು ಕಡಿಯಲು ಹೇಳಿತು ನಾನು ಆಗೆಯೇ ಮಾಡಿದ್ದೇನೆ ಎಂದು ಕಥೆ ಕಟ್ಟಿದ್ದಾನೆ.

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು