ಮಂಗಳೂರು ಪಾಲಿಕೆ ಆಡಳಿತ ಬಿಜೆಪಿ ತೆಕ್ಕೆಗೆ: ಪ್ರೇಮಾನಂದ ಮೇಯರ್, ಉಪ ಮೇಯರ್‌ ಆಗಿ ಸುಮಂಗಲಾ ಆಯ್ಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು(02-03-2021): ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್‌ ಆಗಿ ಸುಮಂಗಲಾ ರಾವ್‌ ಅವರು ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ನ ಅನಿಲ್ ಕುಮಾರ್ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅವರ ವಿರುದ್ದ ಬಿಜೆಪಿಯ ಪ್ರೇಮಾನಂದ ಶೆಟ್ಟಿ 46-14 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಉಪ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಜೆಸಿಂತಾ ವಿರುದ್ಧ ಸುಮಂಗಲಾ ರಾವ್‌ 46-14 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ.

ಮಂಗಳೂರು ನಗರ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್‌ 14 ಹಾಗೂ ಎಸ್‌ಡಿಪಿಐನ ಇಬ್ಬರು ಸದಸ್ಯರು ಇದ್ದಾರೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು