ಭಾರತದಲ್ಲಿ ನಿರುದ್ಯೋಗ ಹೆಚ್ಚಳಕ್ಕೆ ಕೇಂದ್ರದ ಕೆಟ್ಟ ನಿರ್ಧಾರಗಳು ಕಾರಣ- ಮನಮೋಹನ್ ಸಿಂಗ್

manmohan singh
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(02-03-2021): ಕೇಂದ್ರದ ವಿರುದ್ಧ ವಾಗ್ಧಾಳಿ ನಡೆಸಿದ ಮಾಜಿ ಪ್ರಧಾನಿ ಡಾ.ಮನ್ಮೋಹನ್ ಸಿಂಗ್ ಅವರು ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ ಮತ್ತು 2016 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ತೆಗೆದುಕೊಂಡ ಕೆಟ್ಟ ನೋಟು ನಿಷೇಧ ನಿರ್ಧಾರದಿಂದಾಗಿ ಅನೌಪಚಾರಿಕ ವಲಯವು ಅಸ್ತವ್ಯಸ್ತವಾಗಿದೆ. ಕೇಂದ್ರ ಸರಕಾರವು ರಾಜ್ಯಗಳ ಜೊತೆ ಸಮಾಲೋಚನೆಯನ್ನು ಕೂಡ ನಡೆಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಡೆವಲಪ್ಮೆಂಟ್ ಸ್ಟಡೀಸ್ ಆಯೋಜಿಸಿರುವ ಅಭಿವೃದ್ಧಿ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮನಮೋಹನ್ ಸಿಂಗ್, ಭಾರತ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ನ ತಾತ್ಕಾಲಿಕ ಕ್ರಮಗಳು ಸಣ್ಣ ಮತ್ತು ಮಧ್ಯಮ ವಲಯದ ಮೇಲೆತ್ತಲು ಸಾಧ್ಯವಲ್ಲ. ಭಾರತದಲ್ಲಿ ನಿರುದ್ಯೋಗವು ಹೆಚ್ಚಾಗಿದೆ ಮತ್ತು ಅನೌಪಚಾರಿಕ ವಲಯವು ಅಸ್ತವ್ಯಸ್ತವಾಗಿದೆ ಎಂದು ಹೇಳಿದ್ದಾರೆ.

ಕೇರಳ ರಾಜ್ಯ ಚುನಾವಣೆಗೆ ಮುಂಚಿತವಾಗಿ ಕೇರಳದ ಅಭಿವೃದ್ಧಿಯ ವಿಚಾರಗಳ ಬಗ್ಗೆ ವಿಷನ್ ಡಾಕ್ಯುಮೆಂಟ್ ಅನ್ನು ಪ್ರಾರಂಭಿಸಲು ಶೃಂಗಸಭೆಯನ್ನು ಆಯೋಜಿಸಲಾಗಿದೆ. ಕೇರಳ ಸೇರಿ ಇತರ ಅನೇಕ ರಾಜ್ಯಗಳು ಅತಿಯಾದ ಸಾಲವನ್ನು ಆಶ್ರಯಿಸಬೇಕಾಗಿರುವುದರಿಂದ ಸಾರ್ವಜನಿಕ ಹಣಕಾಸು ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಇದು ಭವಿಷ್ಯದ ಬಜೆಟ್ ಮೇಲೆ ಅಸಹನೀಯ ಹೊರೆ ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು