ಮಾರ್ಚ್ 23 ರ ಒಳಗೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಖಾಸಗಿ ಶಾಲೆಗಳು ಬಂದ್ – ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ ರುಪ್ಸಾ (RUPSA)

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಭಾನುವಾರ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆ ಸೇರಿದ ರುಪ್ಸಾ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದು, ಮಾರ್ಚ್ 23 ರ ಒಳಗಡೆ ನಮ್ಮ ಬೇಡಿಕೆ ಈಡೇರದಿದ್ದರೆ ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದೆ.

ಸಭೆಯಲ್ಲಿ ಮಾತನಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ” ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಬೇಡಿಕೆಗಳನ್ನು ಈಡೇರಿಸದೇ ಇರುವುದರಿಂದ ಮತ್ತೆ ರೋಡಿಗಳಿದು ಪ್ರತಿಭಟನೆ ನಡೆಸಲಾಗುತ್ತದೆ. ಸರ್ಕಾರದ ಆದೇಶದಂತೆ ಶೇ. 70 ರಷ್ಟು ಟ್ಯುಷನ್ ಫೀಸ್ ಕೂಡ ಪೋಷಕರು ಕಟ್ಟುತ್ತಿಲ್ಲ. ಇದರಿಂದ ಶಾಲೆ ನಡೆಸುವುದು ತುಂಬಾ ಕಷ್ಟವಾಗಿದೆ. ಇದು ಸೇರಿದಂತೆ ಹಲವು ಬೇಡಿಕೆ ಈಡೇರಿಸುಲು ಮಾರ್ಚ್ 23 ಕೊನೆಯ ದಿನ. ಒಂದು ವೇಳೆ ನಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದರೆ ಮಾರ್ಚ್ 23 ರಂದು ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು” ಎಂದು ಹೇಳಿದರು.

ಕೆಲ ಬೇಡಿಕೆಗಳು:-
– ಕಟ್ಟಡ ಸುರಕ್ಷತಾ ಪ್ರಮಾಣ ಪತ್ರದ ವಿಷಯದಲ್ಲಿ ಹತ್ತು ಸಾವಿರ ಶಾಲೆಗಳು ಬಂದ್ ಆಗಲಿವೆ.ಈ ವಿಚಾರದಲ್ಲಿ ಸರ್ಕಾರ ಪರಿಶೀಲನೆ ನಡೆಸಬೇಕು.
– ಶಿಕ್ಷಕರ ಕಲ್ಯಾಣ ನಿಧಿಯಿಂದ ಖಾಸಗಿ ಶಾಲಾ ಶಿಕ್ಷಕರಿಗೂ ಪರಿಹಾರ ಸಿಗುವಂತೆ ಮಾಡಬೇಕು.
-ಕರ್ನಾಟಕ ಖಾಸಗಿ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು